ಶಾಸಕ, ರೈತ ನಾಯಕ ಪುಟ್ಟಣ್ಣಯ್ಯ ನಿಧನ
ಮಂಡ್ಯ, ಫೆ.18: ಶಾಸಕ, ರೈತ ನಾಯಕ ಕೆ.ಎಸ್. ಪುಟ್ಟಣ್ಣಯ್ಯ(69 ವರ್ಷ)ಇಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪುಟ್ಟಣ್ಣಯ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯ ವೀಕ್ಷಿಸುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು ಕುಸಿದುಬಿದ್ದರು. ಅವರನ್ನು ಕೂಡಲೇ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.
2013ರ ವಿಧಾನಸಭಾ ಚುನಾವಣೆಯಲ್ಲಿ ಪುಟ್ಟಣ್ಣಯ್ಯ ಸರ್ವೋದಯ ಪಕ್ಷದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
Next Story