ಬೆಂಗಳೂರು: ಜೂಜಾಡುತ್ತಿದ್ದ 11 ಜನರ ಬಂಧನ
ಬೆಂಗಳೂರು, ಫೆ.20: ಮನೆಯೊಂದರಲ್ಲಿ ಹಣ ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಆರೋಪದ ಮೇಲೆ 11 ಜನರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯ ಈಜುಕೊಳ ಬಡಾವಣೆ, 5ನೇ ಕ್ರಾಸ್ ಮನೆಯೊಂದರಲ್ಲಿ 11 ಮಂದಿ ಸೇರಿಕೊಂಡು ಹಣ ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ 1.5 ಲಕ್ಷ ರೂ. ನಗದು ವಶಕ್ಕೆ ಪಡೆಯಲಿದ್ದು, ಇಲ್ಲಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.
Next Story