ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲ ಗಂಟೆಗಳಲ್ಲೇ ಬಜೆಟ್ ಮಂಡಿಸಿದ ಪಾರಿಕ್ಕರ್
ಹೊಸದಿಲ್ಲಿ, ಫೆ.22: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲ ಗಂಟೆಗಳಲ್ಲೇ ಗೋವಾ ಬಜೆಟ್ ಮಂಡಿಸಿದ್ದಾರೆ.
ಬಜೆಟ್ ಮಂಡನೆಯಾದ ಕೆಲ ಸಮುಯದಲ್ಲೇ ಅವರು ತಮ್ಮ ಆರೋಗ್ಯದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ವಿವರಿಸಲಿದ್ದಾರೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮುಂಬೈಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಫೆ.15ರಂದು ಪಾರಿಕ್ಕರ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇದೋಜೀರಕ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆಗಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನಂತರ ತಿಳಿದುಬಂದಿತ್ತು.
Next Story