ಸಂಜೀವ ಶೆಟ್ಟಿ
ಉಡುಪಿ, ಫೆ.26: ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಇಂಗ್ಲಿಷ್ ಉಪನ್ಯಾಸಕ ಸಂಜೀವ ಶೆಟ್ಟಿ (89) ರವಿವಾರ ಸಂಜೆ ನಿಧನ ಹೊಂದಿದರು.
ಮೃತರು ಮೂವರು ಪುತ್ರಿಯರು ಹಾಗೂ ಓರ್ವ ಪುತ್ರ ಹಾಗೂ ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ. ಸುಮಾರು 22 ವರ್ಷಗಳ ಕಾಲ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಮೃತರ ನಿಧನಕ್ಕೆ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಜಗದೀಶ್ ಶೆಟ್ಟಿ, ಕಾಲೇಜಿನ ಉಪನ್ಯಾಸಕರು, ನಿವೃತ್ತ ಉಪನ್ಯಾಸಕರು ಹಾಗೂ ಹಳೆ ವಿದ್ಯಾರ್ಥಿಸಂಘದ ಅಧ್ಯಕ್ಷ ಡಾ.ಬಿ.ಎಂ ಸೋಮಯಾಜಿ ಮತ್ತು ಕಾರ್ಯದರ್ಶಿ ಮುರಲಿ ಕಡೇಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story