varthabharthi

ರಾಷ್ಟ್ರೀಯ

ಐಎನ್‌ಎಕ್ಸ್ ಮೀಡಿಯಾ ಹಗರಣ

ಮಾ. 15: ಜಾರಿ ನಿರ್ದೇಶನಾಲಯದ ಮನವಿ ವಿಚಾರಣೆ

ವಾರ್ತಾ ಭಾರತಿ : 13 Mar, 2018

ಹೊಸದಿಲ್ಲಿ, ಮಾ. 13: ಐಎನ್‌ಎಕ್ಸ್ ಮೀಡಿಯಾ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿ ಚಿದಂಬರಂಗೆ ದಿಲ್ಲಿ ಉಚ್ಚ ನ್ಯಾಯಾಲಯ ನೀಡಿದ್ದ ಮಧ್ಯಂತರ ಪರಿಹಾರ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 15ರಂದು ವಿಚಾರಣೆ ನಡೆಸಲಿದೆ. ತುರ್ತು ವಿಚಾರಣೆ ನಡೆಸುವಂತೆ ಆಗ್ರಹಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎ.ಎಂ. ಖಾನ್ವಿಲ್ಕರ್ ಹಾಗೂ ಡಿ.ವೈ. ಚಂದ್ರಚೂಡ ಅವರನ್ನು ಒಳಗೊಂಡ ಪೀಠ ಮಂಗಳವಾರ ಪರಿಗಣಿಸಿದೆ ಹಾಗೂ ಮಾರ್ಚ್ 15ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ತುರ್ತು ವಿಚಾರಣೆ ನಡೆಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ ಜಾರಿ ನಿರ್ದೇಶನಾಲಯದ ಪರವಾಗಿ ನ್ಯಾಯವಾದಿ ರಜತ್ ನಾಯರ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಉಚ್ಚ ನ್ಯಾಯಾಲಯ ಮಾರ್ಚ್ 9ರಂದು ಕಾರ್ತಿಕ್‌ಗೆ ಮಧ್ಯಂತರ ಪರಿಹಾರ ನೀಡಿತ್ತು ಹಾಗೂ ಮಾರ್ಚ್ 20ರ ವರೆಗೆ ಬಂಧಿಸದಂತೆ ನಿರ್ಬಂಧಿಸಿತ್ತು. ಸಿಬಿಐ ನ್ಯಾಯಾಲಯ ಸೋಮವಾರ ಕಾರ್ತಿ ಅವರನ್ನು ಮಾರ್ಚ್ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕಾರ್ತಿ ಅವರ ಜಾಮೀನು ಅರ್ಜಿ ಮಾರ್ಚ್ 15ರಂದು ವಿಚಾರಣೆಗೆ ಪರಿಗಣಿಸಿರುವುದರಿಂದ ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)