5ನೆ ತರಗತಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರಗೈದು, ಬೆಂಕಿ ಹಚ್ಚಿದ ದುಷ್ಕರ್ಮಿಗಳು
ನಾಗೌನ್ (ಅಸ್ಸಾಂ), ಮಾ.24: ಐದನೆ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಸಾಮೂಹಿಕ ಅತ್ಯಾಚಾರಗೈದ ದುಷ್ಕರ್ಮಿಗಳು ನಂತರ ಆಕೆಯನ್ನು ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಬಾಲಕಿಯ ದೇಹದ 90 ಶೇ. ಭಾಗಗಳು ಸುಟ್ಟುಹೋಗಿದ್ದು, ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಾಳೆ.
ತನ್ನನ್ನು ಅತ್ಯಾಚಾರಗೈದ ದುಷ್ಕರ್ಮಿಗಳು ನಂತರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಕೊನೆಯುಸಿರೆಳೆಯುವುದಕ್ಕೆ ಮೊದಲು ಬಾಲಕಿ ಆರೋಪಿಗಳನ್ನು ಹೆಸರಿಸಿದ್ದಾಳೆ.
ನಾಗೌನ್ ನ ಲಾಲುಂಗ್ ಗಾವ್ನ್ ನ ಧನಿಯಾಭೇಟಿಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ 11 ಮತ್ತು 10 ವರ್ಷದ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ 21 ವರ್ಷದ ಯುವಕ ತಲೆಮರೆಸಿಕೊಂಡಿದ್ದಾನೆ.
ಶಾಲೆಯಿಂದ ಮರಳಿದ ಬಳಿಕ ಬಾಲಕಿ ಒಂಟಿಯಾಗಿದ್ದಳು. ಈ ಸಂದರ್ಭ ಮನೆಗೆ ನುಗ್ಗಿದ ಮೂವರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
Next Story