ಕೂಳೂರು: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ
ಕೂಳೂರು, ಮಾ. 25: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಂತರ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎನ್ನಲಾದ ಘಟನೆ ರವಿವಾರ ಬೆಳಗ್ಗೆ ಕೂಳೂರು ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಿಂದ ಕಾರು ಚಾಲಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ಪಡೆದ ಇಲ್ಲಿನ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ, ಮಾಹಿತಿ ಪಡೆದುಕೊಂಡಿದ್ದಾರೆ.
Next Story