ಬಾದಾಮಿಯಿಂದ ಸ್ಪರ್ಧೆ; ನಾಳೆ ರಾಹುಲ್ ಜೊತೆ ಚರ್ಚಿಸಿ ನಿರ್ಧಾರ: ಸಿದ್ದರಾಮಯ್ಯ
ಮೈಸೂರು, ಎ.20: ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತಂತೆ ಶನಿವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚಿಸಿ ನಿರ್ಧರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಈ ನಡುವೆ ಬಾದಾಮಿ ಕ್ಷೇತ್ರದಿಂದ ಎ.23ರಂದು ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ ಫೇಸ್ಬುಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯರ ಸ್ಪರ್ಧೆ ಬಹುತೇಕ ಖಚಿತ ಎಂಬ ಮಾತು ಕೇಳಿಬರುತ್ತಿದೆ.
ಈ ನಡುವೆ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಹನುಮಂತಪ್ಪ ಮಾವಿನಮರದ್ ಸ್ಪರ್ಧೆಗಿಳಿಯಲಿದ್ದಾರೆ. ಅವರು ಎ.23ರಂದು ನಾಮಪತ್ರ ಸಲ್ಲಿಸಲಿರುವರು ಎಂದು ತಿಳಿದುಬಂದಿದೆ.
Next Story