ಸಚಿವ ಮಹದೇವಪ್ಪ ಮನೆ ಮೇಲೆ ಐಟಿ ದಾಳಿ
ಮೈಸೂರು, ಎ.24: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಮೈಸೂರಿನ ವಿಜಯ ನಗರದಲ್ಲಿರುವ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ ಘಟನೆ ವರದಿಯಾಗಿದೆ.
ಆದಾಯ ತೆರಿಗೆ ಅಧಿಕಾರಿಗಳ ದಾಳಿ ವೇಳೆ ಸಚಿವ ಮಹದೇವಪ್ಪ ಅವರು ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ.
ಆದಾಯ ತೆರಿಗೆ ಅಧಿಕಾರಿಗಳು ಸಚಿವರ ಮನೆಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಕರ್ನಾಟದಲ್ಲಿ ವಿಧಾನ ಸಭಾ ಚುನಾವಣೆಯ ಕಾವು ಏರುತ್ತಿರುವಾಗಲೇ ರಾಜ್ಯ ಸರಕಾರದ ಪ್ರಭಾವಿ ಸಚಿವ ಮಹದೇವಪ್ಪ ಮನೆ ಮೇಲೆ ಐಟಿ ದಾಳಿ ನಡೆದಿದೆ.
Next Story