varthabharthi

ಬೆಂಗಳೂರು

ಜೆಡಿಎಸ್ ಗೆ ಬೆಂಬಲ ನೀಡಲು ಕಾಂಗ್ರೆಸ್ ನಿರ್ಧಾರ: ಸಿದ್ದರಾಮಯ್ಯ

ವಾರ್ತಾ ಭಾರತಿ : 15 May, 2018

ಬೆಂಗಳೂರು, ಮೇ 15: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ನೀಡಿರುವ ಜನಾದೇಶವನ್ನು ಪಾಲಿಸುತ್ತೇವೆ. ಜಾತ್ಯಾತೀತ ಪಕ್ಷದ ಸ್ಥಾಪನೆಗಾಗಿ ನಾವು ಜೆಡಿಎಸ್ ಅನ್ನು ಬೆಂಬಲಿಸಲು ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷವೂ ಅಧಿಕಾರ ಹಿಡಿಯುವ ಬಹುಮತ ಸಾಧಿಸಿಲ್ಲ. ಜಾತ್ಯಾತೀತ ಪಕ್ಷದ ಉಳಿವಿಗಾಗಿ ನಾವು ಜೆಡಿಎಸ್ ಅನ್ನು ಬೆಂಬಲಿಸಲಿದ್ದೇವೆ ಎಂದವರು ಹೇಳಿದರು.

ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಝಾದ್, "ಈಗಾಗಲೇ ಎಚ್.ಡಿ. ದೇವೇಗೌಡ ಹಾಗು ಕುಮಾರಸ್ವಾಮಿಯವರೊಂದಿಗೆ ಫೋನ್ ಕರೆಯ ಮೂಲಕ ಮಾತನಾಡಿದ್ದೇವೆ. ಸಕಾರಾತ್ಮಕ ಪ್ರತಿಕ್ರಿಯೆ ಲಭಿಸಿದೆ" ಎಂದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)