varthabharthi

ಬೆಂಗಳೂರು

ವಿಧಾನಸಭೆ ಚುನಾವಣೆಯಲ್ಲಿ ಸೋಲು: ಕಣ್ಣೀರಿಟ್ಟ ಮಾಜಿ ಶಾಸಕ ಕೋನರೆಡ್ಡಿ

ವಾರ್ತಾ ಭಾರತಿ : 16 May, 2018

ಬೆಂಗಳೂರು, ಮೇ 16: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರಿಂದ ತೀವ್ರ ಮನ ನೊಂದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಕಣ್ಣೀರಿಟ್ಟಿದ್ದಾರೆ.

ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಕೋನರೆಡ್ಡಿ, ಚುನಾವಣೆಯಲ್ಲಿ ತಾವು ಸೋತಿದ್ದಕ್ಕೆ ತುಂಬಾ ಬೇಸರಗೊಂಡು ಕಣ್ಣೀರಿಟ್ಟಿದ್ದಾರೆ. ಮಹದಾಯಿ ವಿಚಾರದಲ್ಲಿ ಸಾಕಷ್ಟು ಹೋರಾಟ ಮಾಡಿದ್ದರೂ ಜನರು ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ.

ನವಲಗುಂದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದರು. ತೀವ್ರ ದುಃಖಿತರಾದ ಕೋನರೆಡ್ಡಿ ಅವರನ್ನು ಕುಮಾರಸ್ವಾಮಿ ಅವರು ಸಮಾಧಾನಪಡಿಸಿದರು ಎಂದು ತಿಳಿದುಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)