varthabharthi

ಬೆಂಗಳೂರು

ನಾಳೆ ಸಿಎಂ ಆಗಿ ಬಿಎಸ್‌ವೈ ಪ್ರಮಾಣ ವಚನ

ಬಿಜೆಪಿ ಸರಕಾರ ರಚನೆಗೆ ರಾಜ್ಯಪಾಲರ ಆಹ್ವಾನ

ವಾರ್ತಾ ಭಾರತಿ : 16 May, 2018

ಬೆಂಗಳೂರು, ಮೇ 16: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಸರಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪ ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.

ಬಿಎಸ್‌ವೈ ನಾಳೆ ಬೆಳಗ್ಗೆ 9:00ಕ್ಕೆ ರಾಜ್ಯಪಾಲ ವಜೂಭಾಯಿ ವಾಲಾ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕುರಿತು ರಾಜಭವನದಿಂದ ಈಗಷ್ಟೇ ಅಧಿಕೃತ ಮಾಹಿತಿ ನಮಗೆ ಲಭಿಸಿದೆ. ಬಹುಮತ ಸಾಬೀತಿಗೆ 15 ದಿನಗಳ ಕಾಲಾವಕಾಶವಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)