varthabharthi

ರಾಷ್ಟ್ರೀಯ

ಕಥುವಾ ಪ್ರಕರಣ; ಸಾಕ್ಷಿಗಳಿಗೆ ರಕ್ಷಣೆ ನೀಡಲು ಅಸಾಧ್ಯ: ಸುಪ್ರೀಂ ಕೋರ್ಟ್

ವಾರ್ತಾ ಭಾರತಿ : 16 May, 2018

ಹೊಸದಿಲ್ಲಿ, ಮೇ 16: ಕಥುವಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 17ಕ್ಕೆ ಮುಂದೂಡಿದೆ. ಪ್ರಕರಣವನ್ನು ಜುಮ್ಮ ಕಾಶ್ಮೀರ ಕ್ರೈಮ್ ಬ್ರಾಂಚ್‌ನಿಂದ ಹಿಂದೆ ಪಡೆಯಲು ಹಾಗೂ ಯಾವುದೇ ಇತರ ತನಿಖಾ ಸಂಸ್ಥೆಗೆಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಜಮ್ಮು ಕಾಶ್ಮೀರ ಪೊಲೀಸರು ನಮಗೆ ಕಿರುಕುಳ ನೀಡಿದ್ದಾರೆ ಎಂದು ಕಥುವಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಸಾಕ್ಷಿಗಳು ಆರೋಪಿಸಿದ್ದರು. ಬಲವಂತದ ಮೂಲಕ ಪೊಲೀಸರು ಹೇಳಿಕೆ ಪಡೆದಿದ್ದಾರೆ ಎಂದು ಈ ಸಾಕ್ಷಿಗಳು ದಂಡಾಧಿಕಾರಿ ಮುಂದೆ ಹೇಳಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)