ಎಚ್.ಡಿ.ಕುಮಾರಸ್ವಾಮಿ ಬುಧವಾರ ಮೈಸೂರಿಗೆ ಆಗಮನ
ಮೈಸೂರು,ಮೇ.22: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಮೈಸೂರಿಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ 7.30ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ 8.20ಕ್ಕೆ ಲಲಿತಮಹಲ್ ಹೆಲಿಪ್ಯಾಡ್ ಗೆ ಬಂದಿಳಿಯಲಿದ್ದಾರೆ. 8.30ಕ್ಕೆ ಲಲಿತ ಮಹಲ್ ಹೆಲಿಪ್ಯಾಡ್ ನಿಂದ ರಸ್ತೆಯ ಮೂಲಕ 8.45ಕ್ಕೆ ಚಾಮುಂಡಿ ಬೆಟ್ಟ ತಲುಪಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಅಲ್ಲಿಂದ 9.30ಕ್ಕೆ ರಸ್ತೆಯ ಮೂಲಕ ಲಲಿತ್ ಮಹಲ್ ಹೆಲಿಪ್ಯಾಡ್ ಗೆ ಆಗಮಿಸಿ 9.50ಕ್ಕೆ ಲಲಿತ ಮಹಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ರಾಮನಗರಕ್ಕೆ ತೆರಳಿ 10.20ಕ್ಕೆ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿಳಿಯಲಿದ್ದು, ನಗರ ದೇವತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ 12ಗಂಟೆಗೆ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ತೆರಳಿ 12.30ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story