ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ : ಮಾಜಿ ಸಿಎಂ ಸಿದ್ದರಾಮಯ್ಯ
ಹೊಸದಿಲ್ಲಿ, ಮೇ 27: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಮೆರಿಕ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗಿದ್ದು, 3-4 ದಿನಗಳಲ್ಲಿ ರಾಹುಲ್ ಗಾಂಧಿ ವಾಪಸಾದ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟಕ್ಕೆ ಸಚಿವರುಗಳ ಸೇರ್ಪಡೆಗೆ ಸಂಬಂಧಿಸಿ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದರು.
ಸಿಎಂ ಸ್ಥಾನದ ಅವಧಿಯ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ಅವರು " ಮುಖ್ಯಮಂತ್ರಿ ಸ್ಥಾನದ ಅವಧಿ 30 ತಿಂಗಳೋ ಅಥವಾ 5 ವರ್ಷವೋ?" ಎನ್ನುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಏನನ್ನು ಹೇಳಲಿಲ್ಲ.
ಸಚಿವ ಸ್ಥಾನಗಳ ಹಂಚಿಕೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಪಕ್ಷಗಳ ನಡುವೆ ಯಾವುದೇ ಗೊಂದಲವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Next Story