varthabharthi

ರಾಷ್ಟ್ರೀಯ

12 ಮಂದಿಗೆ ಗಾಯ

ಭೀಕರ ರಸ್ತೆ ಅಪಘಾತಕ್ಕೆ 17 ಮಂದಿ ಬಲಿ

ವಾರ್ತಾ ಭಾರತಿ : 13 Jun, 2018
Varthabharathi

ಲಕ್ನೋ, ಜೂ.13: ಉತ್ತರ ಪ್ರದೇಶ ಮಣಿಪುರಿ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಸುಮಾರು 17 ಮಂದಿ ಮೃತಪಟ್ಟು , 12 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ರಸ್ತೆ ವಿಭಜಕಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದ್ದು, ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕನೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

 

Comments (Click here to Expand)