varthabharthi

ರಾಷ್ಟ್ರೀಯ

ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣ: ಕಾರ್ತಿ ಚಿದಂಬರಂ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ವಾರ್ತಾ ಭಾರತಿ : 13 Jun, 2018

ಹೊಸದಿಲ್ಲಿ, ಜೂ. 13: ಏರ್‌ಸೆಲ್ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ ಬುಧವಾರ ದಿಲ್ಲಿ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ದಾಖಲಿಸಿದೆ. ಈ ಆರೋಪ ಪಟ್ಟಿಯನ್ನು ಜುಲೈ 4ರಂದು ಪರಿಶೀಲನೆ ನಡೆಸಲಾಗುವುದು ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರುಬಿ ಅಲ್ಕಾ ಗುಪ್ತಾ ಹೇಳಿದ್ದಾರೆ. ಕಾರ್ತಿ ಹೊರತುಪಡಿಸಿ ಇತರ ನಾಲ್ಕು ಮಂದಿಯನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಆರೋಪ ಪಟ್ಟಿಯ ವಿವಿಧ ಭಾಗಗಳಲ್ಲಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರ ಹೆಸರನ್ನು ಜಾರಿ ನಿರ್ದೇಶನಾಲಯ ಉಲ್ಲೇಖಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದ ಪೂರಕ ಆರೋಪ ಪಟ್ಟಿಯನ್ನು ಸಲ್ಲಿಸಲಾಗುವುದು ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)