ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜೂ.15: ಮುಖ್ಯಮಂತ್ರಿಯವರ ಮುಖ್ಯ ಕಾರ್ಯದರ್ಶಿ-2 ತುಷಾರ್ ಗಿರಿನಾಥ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೇಂದ್ರ ನಿಯೋಜನೆಯಿಂದ ಬಂದಿರುವ ಹಿರಿಯ ಐಎಎಸ್ ಅಧಿಕಾರಿ ಡಾ. ಎಸ್. ಸೆಲ್ವಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶ ದವರೆಗೆ ಮುಖ್ಯಮಂತ್ರಿಯವರ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.ಪಂಕಜ್ ಕುಮಾರ್ ಪಾಂಡೆ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆಹಾರ ಮತ್ತು ನಾಗರಿಕ, ಗ್ರಾಹಕರ ವ್ಯವಹಾರ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಲಾಗಿದೆ.
Next Story