ದ.ಕ. ಜಿಲ್ಲೆಗೆ ದೀನ್ ದಯಾಳ ಪಂಚಾಯತ್ ಸಶಕ್ತೀಕರಣ ಪುರಸ್ಕಾರ
ಮಂಗಳೂರು, ಜೂ.19: ಪ್ರತೀ ವರ್ಷ ಕೇಂದ್ರ ಸರಕಾರದಿಂದ ನೀಡುವ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪುರಸ್ಕಾರವು 2016-17ನೆ ಸಾಲಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ಗೆ ಲಭಿಸಿದೆ.
ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಜರಗಿದ ರಾಷ್ಟ್ರೀಯ ಪಂಚಾಯತ್ರಾಜ್ ದಿವಸದಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ದ.ಕ. ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಂ.ಆರ್. ರವಿ ಪ್ರಶಸ್ತಿ ಸ್ವೀಕರಿಸಿದರು. ಜಿಲ್ಲಾ ಪಂಚಾಯತ್ ಸಾಧಿಸಿರುವ ಅದ್ವಿತೀಯ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿ ಪ್ರಶಸ್ತಿ ನೀಡಲಾಗಿದ್ದು, ರಾಜ್ಯದಲ್ಲಿಯೇ ಏಕೈಕ ಜಿಲ್ಲಾ ಪಂಚಾಯತ್ ಆಗಿದೆ. ಈ ಪುರಸ್ಕಾರವು ರೂ. 50 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದು ಪ್ರಕಟನೆ ತಿಳಿಸಿದೆ.
Next Story