ಕಾಪು: ಈಚರ್ಗೆ ಟ್ಯಾಂಕರ್ ಢಿಕ್ಕಿ; ಮೂವರಿಗೆ ಗಾಯ
ಕಾಪು, ಜೂ.22: ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈಚರ್ ಟೆಂಪೊ ಮತ್ತು ಟ್ಯಾಂಕರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಈಚರ್ ಟೆಂಪೊಗೆ ಹಿಂದಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಈಚರ್ ಹೆದ್ದಾರಿಯ ಡಿವೈಡರ್ ಉರುಳಿ ಬಿತ್ತೆನ್ನಲಾಗಿದೆ. ಅಪಘಾತದ ತೀವ್ರತೆಗೆ ಟ್ಯಾಂಕರ್ನ ಮುಂಭಾಗ ಜಖಂಗೊಂಡಿದ್ದು, ಚಾಲಕನ ಕಾಲು ಸಿಲುಕಿಕೊಂಡಿತ್ತು. ಸ್ಥಳೀಯರು ಚಾಲಕನನ್ನು ರಕ್ಷಿಸಲು ಹರಸಾಹಸಪಟ್ಟರು.
ಅದೇ ರೀತಿ ಈಚರ್ನಲ್ಲಿದ್ದವರಿಗೆ ಗಾಯಗಳಾಗಿರುವ ಬಗ್ಗೆ ತಿಳಿದುಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿದ್ದು, ಕ್ರೇನ್ ಮೂಲಕ ಅಪಘಾತಕ್ಕೀಡಾದ ವಾಹನ ಗಳನ್ನು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ವಾಹನ ಸಂಚಾರದಲ್ಲ ವ್ಯತ್ಯಯ ಉಂಟಾಗಿದ್ದು, ಇನ್ನಷ್ಟೆ ಹೆಚ್ಚಿನ ಮಾಹಿತಿ ಗಳು ತಿಳಿದು ಬರಬೇಕಾಗಿವೆ.
Next Story