ನವಜೋತ್ ಸಿಂಗ್ ಸಿಧು ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಹೊಸದಿಲ್ಲಿ, ಆ.20: ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಇದೀಗ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೆದ್ ಬಜ್ವಾರನ್ನು ಕಾರ್ಯಕ್ರಮದಲ್ಲಿ ತಬ್ಬಿದ್ದ ಸಿಧು ವಿರುದ್ಧ ಇದೀಗ ದೇಶದ್ರೋಹ ಪ್ರಕರಣ ದಾಖಲಾಗಿದೆ.
ಬಿಹಾರದ ಮುಝಫ್ಫರ್ ಪುರದ ನ್ಯಾಯಾಲಯವೊಂದಕ್ಕೆ ವಕೀಲರೊಬ್ಬರು ಈ ಬಗ್ಗೆ ದೂರು ಸಲ್ಲಿಸಿದ್ದಾರೆ.
ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಿಧು ಭಾಗವಹಿಸಿದ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
Next Story