varthabharthi

ನಿಧನ

ರಾಮಣ್ಣ ಪ್ರಭು ಕರ್ಪೆ

ವಾರ್ತಾ ಭಾರತಿ : 7 Sep, 2018

ಬಂಟ್ವಾಳ, ಸೆ.6: ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ ನಡಿಬೈಲು ನಿವಾಸಿ, ಪ್ರಗತಿಪರ ಕೃಷಿಕ ರಾಮಣ್ಣ ಪ್ರಭು (87) ಅವರು ಗುರುವಾರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. 

ಅವರು ಗ್ರಾಮದ ಗ್ರಾಮದೈವ ಶ್ರೀದೈವ ಕೊಡಮಣಿತ್ತಾಯ ದೈವಸ್ಥಾನ ಟ್ರಸ್ಟ್‍ನ ಅಧ್ಯಕ್ಷರಾಗಿದ್ದರು. ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್‍ನ ಹಿರಿಯ ಸದಸ್ಯರಾಗಿ, ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 

ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಬಂಟ್ವಾಳ ತಾಪಂ ಸದಸ್ಯ ಪ್ರಭಾಕರ ಪ್ರಭು, ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಪೂವಲ ಕರ್ಪೆ, ಕಾರ್ಯದರ್ಶಿ ಕೆ. ರತ್ನಕುಮಾರ್ ಚೌಟ, ರಾಷ್ಟ್ರ ಪ್ರಶಸ್ತಿ ಪುರಸ್ಕøತ ಶಿಕ್ಷಕ ರಮೆಶ್ ನಾಯಕ್ ರಾಯಿ, ಕೊಡಮಣಿತ್ತಾಯ ಟ್ರಸ್ಟ್‍ನ ಕಾರ್ಯಾಧ್ಯಕ್ಷ ಡಾ. ರಾಮರಾಯ ಪ್ರಭು ಕರ್ಪೆ ಮತ್ತಿತರರು ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರು ಸಂತಾಪ ಸೂಚಿಸಿದ್ದಾರೆ. ಮೃತರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)