varthabharthi

ಮಾಹಿತಿ - ಮಾರ್ಗದರ್ಶನ

ವಿದ್ಯಾರ್ಥಿ ವೇತನ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ವಾರ್ತಾ ಭಾರತಿ : 21 Sep, 2018

ಮಂಗಳೂರು, ಸೆ.20:2018-19ನೇ ಸಾಲಿಗೆ ಏಕೀಕೃತ ರಾಜ್ಯ ವಿದ್ಯಾರ್ಥಿ ವೇತನ (ಕಾಮನ್ ಸ್ಕಾಲರ್‌ಶಿಪ್) ತಂತ್ರಾಂಶ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಇತರ ಹಿಂದುಳಿದ ವರ್ಗ/ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಪಡೆಯಲು ನೋಂದಣಿ ಕಡ್ಡಾಯವಾಗಿದ್ದು, ಈ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ.

ವಿದ್ಯಾರ್ಥಿ ವೇತನಕ್ಕಾಗಿ ನೋಂದಾಯಿಸಲು ವಿದ್ಯಾರ್ಥಿ/ತಂದೆ-ತಾಯಿ/ಪೋಷಕರ ಆಧಾರ ಸಂಖ್ಯೆ ಮತ್ತು ಜಾತಿ- ಆದಾಯ ಪ್ರಮಾಣ ಪತ್ರ ಅತ್ಯಗತ್ಯ. ಈವರೆಗೆ ಅರ್ಜಿ ಸಲ್ಲಿಸದೆ ಇರುವವರು ಸೆ.30ರೊಳಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರಿಗೆ ನೀಡಿ ಆನ್‌ಲೈನ್ ಮೂಲಕ ಅರ್ಜಿ ನೋಂದಾಯಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಆಡಳಿತ) ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)