varthabharthi

ಮಾಹಿತಿ - ಮಾರ್ಗದರ್ಶನ

ದ.ಕ.: ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 25 Sep, 2018

ಮಂಗಳೂರು, ಸೆ.25: ದ.ಕ. ಜಿಲ್ಲೆಯಲ್ಲಿ ಖಾಲಿಯಿರುವ 34 ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 1ರಿಂದ 31ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದ್ವಿತೀಯ ಪಿಯುಸಿ ಅಥವಾ ಸಿಬಿಎಸ್‌ಇ ಅಥವಾ ಐಎಸ್‌ಸಿಇ ನಡೆಸುವ 12ನೇ ತರಗತಿಯ ಪರೀಕ್ಷೆಯಲ್ಲಿ ಮಾತ್ರ ಉತ್ತೀರ್ಣರಾಗಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿಗಳನ್ನು ವೆಬ್‌ಸೈಟ್ http://dk-va.kar.nic.in ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂಸಂ: 0824-2220590, ವೆಬ್‌ಸೈಟ್ https://dk.nic.in/en/  ಅನ್ನು ಪರಿಶೀಲಿಸಬಹುದು ಎಂದು ಗ್ರಾಮ ಲೆಕ್ಕಿಗರ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ದ.ಕ. ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಪ್ರಕಟನೆ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)