ಬಾರಮುಲ್ಲಾ: ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹತ್ಯೆ
ಶ್ರೀನಗರ, ಸೆ. 25: ಜಮ್ಮು ಹಾಗೂ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮಂಗಳವಾರ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಉಗ್ರರು ಅಡಗಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸೋಪೊರೆ ಪಟ್ಟಣದ ಬೊಮಾಯಿ ಪ್ರದೇಶವನ್ನು ಯೋಧರು ಸುತ್ತುವರಿದರು ಹಾಗೂ ಶೋಧ ಕಾರ್ಯಾಚರಣೆ ನಡೆಸಿದರು.
ಈ ಸಂದರ್ಭ ಉಗ್ರರು ದಾಳಿ ನಡೆಸಿದರು. ಯೋಧರು ಪ್ರತಿದಾಳಿ ನಡೆಸಿದರು. ಪರಿಣಾಮ ಇಬ್ಬರು ಉಗ್ರರು ಹತರಾದರು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಎನ್ಕೌಂಟರ್ನಲ್ಲಿ ಹತರಾದ ಉಗ್ರರ ಗುರುತು ಹಾಗೂ ಅವರ ಸಂಘಟನೆ ಬಗ್ಗೆ ಇನ್ನಷ್ಟೆ ಖಚಿತಪಡಿಸಿಕೊಳ್ಳಬೇಕಿದೆ ಎಂದು ಅವರು ತಿಳಿಸಿದ್ದಾರೆ.
Next Story