varthabharthi

ಬೆಂಗಳೂರು

ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

ವಾರ್ತಾ ಭಾರತಿ : 11 Oct, 2018

ಬೆಂಗಳೂರು, ಅ.11: ಅಪರಿಚಿತ ವಾಹನಯೊಂದು ರಸ್ತೆ ದಾಟುತಿದ್ದ ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ದುರ್ಘಟನೆ ಇಲ್ಲಿನ ಯಲಹಂಕದ ಬೆಂಗಳೂರು -ದೊಡ್ಡಬಳ್ಳಾಪುರ ರಸ್ತೆಯ ಬಿಎಸ್‌ಎನ್‌ಎಲ್ ಕಚೇರಿ ಬಳಿ ನಡೆದಿದೆ.

ಯಲಹಂಕ ನಿವಾಸಿ ಶರವಣ (55) ಮೃತಪಟ್ಟ ಪಾದಚಾರಿ ಎಂದು ಪೊಲೀಸರು ತಿಳಿಸಿದ್ದಾರೆ.

ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಶರವಣ, ಗುರುವಾರ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಬೆಂಗಳೂರು -ದೊಡ್ಡಬಳ್ಳಾಪುರ ರಸ್ತೆಯ ಬಿಎಸ್‌ಎನ್‌ಎಲ್ ಕಚೇರಿ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವಾಹನಯೊಂದು ಢಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಢಿಕ್ಕಿ ಹೊಡೆದ ವಾಹನ ನಿಲ್ಲಿಸದೆ ಪರಾರಿಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನನ್ನು ಯಲಹಂಕ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಸಂಚಾರ ಪೊಲೀಸರು ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)