varthabharthi

ಕ್ರೀಡೆ

ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ

ವಾರ್ತಾ ಭಾರತಿ : 11 Oct, 2018

ಹೈದರಾಬಾದ್, ಅ.11: ವೆಸ್ಟ್‌ಇಂಡೀಸ್ ವಿರುದ್ಧ ಶುಕ್ರವಾರ ಆರಂಭವಾಗಲಿರುವ ಎರಡನೇ ಕ್ರಿಕೆಟ್ ಟೆಸ್ಟ್‌ಗೆ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲು ಬಿಸಿಸಿಐ ಮುಂದಾಗಿಲ್ಲ. ಮೊದಲ ಟೆಸ್ಟ್‌ನಲ್ಲಿ ಆಡಿರುವ ತಂಡವನ್ನೇ ಮುಂದುವರಿಸಲು ನಿರ್ಧರಿಸಿದೆ.

ಆರಂಭಿಕ ದಾಂಡಿಗ ಲೋಕೇಶ್ ರಾಹುಲ್ ಕಳೆದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಅವರೊಂದಿಗೆ ಇನಿಂಗ್ಸ್ ಆರಂಭಿಸಿದ್ದ ಪ್ರಥ್ವಿ ಶಾ ಶತಕ ದಾಖಲಿಸಿದ್ದರು.

ಭಾರತ ಎರಡು ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಭಾರತ: ವಿರಾಟ್ ಕೊಹ್ಲಿ(ನಾಯಕ), ಲೋಕೇಶ್ ರಾಹುಲ್, ಪ್ರಥ್ವಿ ಶಾ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಕುಲ್‌ದೀಪ್ ಯಾದವ್, ಮುಹಮ್ಮದ್ ಶಮಿ, ಉಮೇಶ್ ಯಾದವ್, ಶಾರ್ದುಲ್ ಠಾಕೂರ್.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)