varthabharthi

ಬೆಂಗಳೂರು

ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ವಾರ್ತಾ ಭಾರತಿ : 11 Oct, 2018

ಬೆಂಗಳೂರು, ಅ.11: ಕೌಟುಂಬಿಕ ಕಲಹದಿಂದ ಬೇಸತ್ತು ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ.

ಮನೋರಾಯನಪಾಳ್ಯದ 10ನೆ ಕ್ರಾಸ್ ನಿವಾಸಿ ಮಂಜುನಾಥ್(30) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಜುನಾಥ್ ಮದ್ಯದ ಅಮಲಿನಲ್ಲಿ ಪತ್ನಿ ಜೊತೆ ಜಗಳವಾಡುತ್ತಿದ್ದನು. ಬುಧವಾರ ರಾತ್ರಿ ಸಹ 7 ಗಂಟೆ ಸಮಯದಲ್ಲಿ ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳವಾಗಿದೆ. ಇದರಿಂದ ಬೇಸರಗೊಂಡ ಮಂಜುನಾಥ್ ಕೊಠಡಿಗೆ ಹೋಗಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)