varthabharthi

ಬೆಂಗಳೂರು

ಡಿ.ಕೆ.ಶಿವಕುಮಾರ್‌ರಿಂದ ಸರಕಾರಿ ಭೂ ಕಬಳಿಕೆ: ಎನ್.ಆರ್.ರಮೇಶ್ ಆರೋಪ

ವಾರ್ತಾ ಭಾರತಿ : 11 Oct, 2018

ಬೆಂಗಳೂರು, ಅ.11: ವೈದ್ಯಕೀಯ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಗಂಗೇನಹಳ್ಳಿ, ವರ್ತೂರು, ಪೆದ್ದನಪಾಳ್ಯ ಗ್ರಾಮದಲ್ಲಿ ಸರಕಾರಿ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಬಿಜೆಪಿ ನಗರ ವಕ್ತಾರ ಎನ್.ಆರ್.ರಮೇಶ್ ಆರೋಪ ಮಾಡಿದ್ದಾರೆ.

ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿಎಲ್‌ಎಫ್ ಸಂಸ್ಥೆಯಿಂದ ಒತ್ತುವರಿಯಾಗಿರುವ ಜಮೀನಿಗೆ ಸಚಿವ ಡಿ.ಕೆ.ಶಿವಕುಮಾರ್ ಬೆನ್ನೆಲುಬಾಗಿ ನಿಂತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಕಾರದಿಂದ ಈ ಸರಕಾರಿ ಭೂಮಿ ಕಬಳಿಕೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.

ಗಂಗೇನಹಳ್ಳಿ ಗ್ರಾಮದ ಸರ್ವೆ ನಂ.1 ರಿಂದ 99, ವರ್ತೂರು ಗ್ರಾಮದ 7-10, ನರಸೀಪುರ ಗ್ರಾಮದ ಸರ್ವೆ ನಂ. 1-35, ಪೆದ್ದನಪಾಳ್ಯ ಗ್ರಾಮ ಸರ್ವೆ ನಂ. 17-20ರ ವರೆಗಿನ 7ಸಾವಿರ ಕೋಟಿ ರೂ.ಮೌಲ್ಯದ 1,100 ಎಕರೆ ಸರಕಾ ಜಮೀನು ಕಬಳಿಕೆಯಾಗಿದೆ ಎಂದು ಅವರು ವಿವರಿಸಿದರು.

ಇದಕ್ಕೆ ಸಂವಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಶಂಕರ್, ಹೆಚ್ಚಿವರಿ ಜಿಲ್ಲಾಧಿಕಾರಿ ವೆಂಕಟಾಚಲಪತಿ ಹಾಗೂ ಜಗದೀಶ್ ವಿರುದ್ಧವು ದೂರು ಕೊಡಲಾಗಿದೆ. ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕೆಂದು ಅವರು ಒತ್ತಾಯಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)