varthabharthi

ಕರ್ನಾಟಕ

ಕೆ.ಆರ್.ಪೇಟೆ: ಗೃಹೋಪಯೋಗಿ ಸಿಲಿಂಡರ್ ಸ್ಫೋಟ; ಇಬ್ಬರು ಗಂಭೀರ

ವಾರ್ತಾ ಭಾರತಿ : 11 Oct, 2018

ಕೆ.ಆರ್.ಪೇಟೆ, ಅ.11: ಗೃಹೋಪಯೋಗಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಕಟ್ಟೇಕ್ಯಾತನಹಳ್ಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಶಿ(30) ಮತ್ತು ಜೈನಹಳ್ಳಿಯ ಭಾನುಮತಿ(25) ಗಾಯಗೊಂಡವರಾಗಿದ್ದು, ಚಿಕಿತ್ಸೆಗಾಗಿ ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿಯ ಹೆಂಚುಗಳು ಹಾರಿ ಹೋಗಿವೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)