varthabharthi

ರಾಷ್ಟ್ರೀಯ

ಟಿಡಿಪಿ ರಾಜ್ಯಸಭಾ ಸದಸ್ಯ ಸಿ.ಎಂ ರಮೇಶ್ ನಿವಾಸದ ಮೇಲೆ ಐಟಿ ದಾಳಿ

ವಾರ್ತಾ ಭಾರತಿ : 12 Oct, 2018

ಹೈದರಾಬಾದ್, ಅ.12:  ಟಿಡಿಪಿ ರಾಜ್ಯಸಭಾ ಸದಸ್ಯ ಸಿ.ಎಂ ರಮೇಶ್  ಅವರ  ಹೈದರಾಬಾದ್ ನ ಕಡಪದಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು  ಶುಕ್ರವಾರ ದಾಳಿ ನಡೆಸಿದ್ದಾರೆ.

ರಮೇಶ್  ಮತ್ತು ಅವರ ಸಂಬಂಧಿಕರಿಗೆ ಸೇರಿರುವ  ರಿಥ್ವಿಕ್ ಇಂಡಸ್ಟ್ರೀಸ್ ಕಚೇರಿಗೆ ಆದಾಯ ತೆರಿಗೆ ಅಧಿಕಾರಿ ಇಲಾಖಾ  ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. 100ಕ್ಕೂ ಅಧಿಕ  ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಆಂಧ್ರಪ್ರದೇಶದ ತೆಲುಗುದೇಶಂ ಪಕ್ಷದ(ಟಿಡಿಪಿ) ಪ್ರಭಾವಿ ನಾಯಕರಾಗಿರುವ ರಮೇಶ್ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)