varthabharthi

ಕರಾವಳಿ

ಸಚಿವ ಖಾದರ್ ಅವರ ಹುಟ್ಟುಹಬ್ಬದ ನಿಮಿತ್ತ ಟುಡೇ ಫೌಂಡೇಶನ್ ವತಿಯಿಂದ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ವಾರ್ತಾ ಭಾರತಿ : 12 Oct, 2018

ಬಂಟ್ವಾಳ, ಅ. 12: ನಗರಾಭಿವೃದ್ಧಿ ಖಾತೆ ಸಚಿವ ಯು.ಟಿ.ಖಾದರ್ ಅವರ ಹುಟ್ಟುಹಬ್ಬದ ನಿಮಿತ್ತ ಫರಂಗಿಪೇಟೆಯ ಟುಡೇ ಫೌಂಡೇಶನ್ ವತಿಯಿಂದ ಶುಕ್ರವಾರ ಸಂಜೆ ಬಂಟ್ವಾಳದ ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. 

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಫ್. ಉಮರ್ ಫಾರೂಕ್ ಅವರ ನೇತೃತ್ವದಲ್ಲಿ ಟುಡೇ ಫೌಂಡೇಶನ್‍ನ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಉಮರ್ ಫಾರೂಕ್ ಅವರು, ಎಲ್ಲ ಜಾತಿ, ಧರ್ಮದ ನಾಯಕನಾಗಿ ಹೊರಹೊಮ್ಮಿರುವ ಯು.ಟಿ.ಖಾದರ್ ಜಿಲ್ಲೆಗೆ ಗೌರವ ತರುವಂತಹ ಕೆಲಸವನ್ನು ಮಾಡಿದ್ದಾರೆ. ಆರೋಗ್ಯ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಇದೀಗ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಯ ಸಚಿವರಾಗಿ ಬಡವರ ಪರ ಅನೇಕ ಅಭಿವೃದ್ಧ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇಂತಹ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ ಬಡವರ ಪರ ಕೆಲಸ ಮಾಡುವ ಶಕ್ತಿ ದೇವರು ಕರುಣಿಸಲಿ ಎಂದರು. 

ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮಾಜಿ ಉಪಾಧ್ಯಕ್ಷ ಹಾಸೀರ್ ಪೇರಿಮಾರ್, ತಾಪಂ ಮಾಜಿ ಸದಸ್ಯ ಆಸೀಫ್ ಇಕ್ಬಾಲ್,  ಪ್ರಮುಖರಾದ ಇಕ್ಬಾಲ್ ಸುಜೀರ್, ರಫೀಕ್ ಪೇರಿಮಾರ್, ಇಮ್ತಿಯಾಝ್ ತುಂಬೆ, ರಶೀದ್ ತುಂಬೆ, ಪ್ರವೀಣ್ ತುಂಬೆ, ಮಜೀದ್ ಫರಂಗಿಪೇಟೆ, ರಿಯಾಝ್ ಕುಂಪಣಮಜಲು, ಶೌಕತ್ ಪಾಡಿ, ಇಬ್ರಾಹಿಂ ವಳವೂರು, ಮಜೀದ್ ಪೇರಿಮಾರ್, ಸಲೀಂ ಮಲ್ಲಿ ಹಾಜರಿದ್ದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)