varthabharthi

ಬೆಂಗಳೂರು

ಕೆಎಎಸ್ ಅಧಿಕಾರಿಗಳ ವರ್ಗಾವಣೆ

ವಾರ್ತಾ ಭಾರತಿ : 12 Oct, 2018

ಬೆಂಗಳೂರು, ಅ.12: ವಿಧಾನಸಭೆ ಹಾಗೂ ಲೋಕಸಭೆಯ ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಈ ಕೆಳಕಂಡ ಕೆಎಎಸ್ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಚಿತ್ರದುರ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಂಗಪ್ಪರನ್ನು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ರಾಜೇಂದ್ರಪ್ರಸಾದ್‌ರನ್ನು ಮಳ್ಳವಳ್ಳಿಯ ರಾಷ್ಟ್ರೀಯ ಹೆದ್ದಾರಿ-209ರ ವಿಶೇಷ ಭೂ ಸ್ವಾಧೀನಾಧಿಕಾರಿಯನ್ನಾಗಿ ವರ್ಗಾವಣೆ ಗೊಳಿಸಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎನ್.ಸಿದ್ದೇಶ್ವರ್ ಅವರನ್ನು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹಾಗೂ ಮೈಸೂರು ಜಿಲ್ಲೆಯ ಕಾವೇರಿ ನೀರಾವರಿ ನಿಗಮದ ಮುಖ್ಯ ಆಡಳಿತಾಧಿಕಾರಿಯಾಗಿದ್ದ ಆರ್.ರಂಗಸ್ವಾಮಿಯನ್ನು ಮಂಡ್ಯ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ-1(ಆಡಳಿತ)ಯನ್ನಾಗಿ ವರ್ಗಾವಣೆಗೊಳಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)