varthabharthi

ಬೆಂಗಳೂರು

ಪತ್ರಕರ್ತರ ಕೊಠಡಿ ಬದಲಾವಣೆ ಇಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಣೆ

ವಾರ್ತಾ ಭಾರತಿ : 12 Oct, 2018

ಬೆಂಗಳೂರು, ಅ. 12: ವಿಧಾನಸೌಧದ ಮೂರನೇ ಮಹಡಿಯಲ್ಲಿ ಪತ್ರಕರ್ತರಿಗೆ ಒದಗಿಸಲಾಗಿರುವ ಪತ್ರಿಕಾ ಕೊಠಡಿ ಸಂಖ್ಯೆ-333ನ್ನು ಮುಂದುವರಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಾಲಿ ಬಳಕೆಯಾಗುತ್ತಿರುವ ಪತ್ರಿಕಾ ಕೊಠಡಿ ಸಂಖ್ಯೆ-333ರ ಜೊತೆಗೆ ನೆಲ ಮಹಡಿ ಕೊಠಡಿ ಸಂಖ್ಯೆ-9ನ್ನು ಒದಗಿಸಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ಮಾಧ್ಯಮ ಪ್ರತಿನಿಧಿಗಳಿಂದ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಸ್ಪಷ್ಟಣೆ ನೀಡಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)