varthabharthi

ಬೆಂಗಳೂರು

ಗಾಂಜಾ ಮಾರಾಟ: ಇಬ್ಬರ ಬಂಧನ

ವಾರ್ತಾ ಭಾರತಿ : 12 Oct, 2018

ಬೆಂಗಳೂರು, ಅ.12: ಮಾದಕ ವಸ್ತು ಗಾಂಜಾ ಮಾರಾಟದ ಮೇಲೆ ಇಬ್ಬರನ್ನು ಬಂಧಿಸಿರುವ ಉತ್ತರ ವಿಭಾಗದ ಸೋಲದೇವನಹಳ್ಳಿ ಠಾಣಾ ಪೊಲೀಸರು, 4.5 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ತ್ರಿಪುರ ರಾಜ್ಯದ ಸುವಂಕರ್ ಬಿಸ್ವಾಸ್(19), ನೇಪಾಳದ ರಸೀಕ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಾಣವಾರ ಸಮೀಪದ ಗುಟ್ಟೆ ಬಸವೇಶ್ವರನಗರ 1ನೇ ಕ್ರಾಸ್‌ನಲ್ಲಿರುವ ಮನೆ ನಂ.11 ರಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾ ಅಕ್ರಮವಾಗಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)