varthabharthi

ಕರಾವಳಿ

ಅ.14: ಮಂಗಳೂರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ವಾರ್ತಾ ಭಾರತಿ : 12 Oct, 2018

ಮಂಗಳೂರು, ಅ.12:  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅ.14ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಅ.14ರಂದು ಮಧ್ಯಾಹ್ನ 2:50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 3:50ಕ್ಕೆ ಮಂಗಳೂರು  ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 4:30ಕ್ಕೆ ನಗರದ ಕದ್ರಿ ಶಿವಬಾಗ್‌ನ ಸಿಟಿ ಕಾರ್ಪೊರೇಶನ್ ಕಟ್ಟಡದಲ್ಲಿರುವ ವಿಧಾನ ಪರಿಷತ್ ಸದಸ್ಯರ ಕಚೇರಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.

ಸಂಜೆ 5 ಗಂಟೆಗೆ ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ಷನಲ್ ಸೆಂಟರ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ ಟ್ರಸ್ಟ್‌ನಿಂದ ಆಯೋಜಿಸಿದ ಬ್ರಾಂಡ್ ಮಂಗಳೂರು ಮತ್ತು ಪತ್ರಕರ್ತರ ಗ್ರಾಮ ವಾಸ್ತವ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಸಂಜೆ 6 ಗಂಟೆಗೆ ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಮತ್ತು ಮಂಗಳೂರು ದಸರಾ 2018ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 9:20ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ 9.55ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)