ಅ.24ರಂದು ಮಹರ್ಷಿ ವಾಲ್ಮೀಕಿ ಜಯಂತಿ
ಉಡುಪಿ, ಅ.11: ಉಡುಪಿ ನಗರಸಭೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಇವರ ಸಹಯೋಗದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.24ರಂದು ಬೆಳಗ್ಗೆ 10:30ಕ್ಕೆ ಆದಿಉಡುಪಿಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story