ಹೈದರಾಬಾದ್ ನಲ್ಲಿ ಎಚ್1 ಎನ್ 1ಗೆ ಐವರು ಬಲಿ
ಹೈದರಾಬಾದ್, ಅ.17: ಕಳೆದ ಎರಡು ವಾರಗಳಿಂದ ಎಚ್ 1 ಎನ್ 1ಗೆ ಹೈದರಾಬಾದ್ ನಲ್ಲಿ ಐವರು ಮೃತಪಟ್ಟಿದ್ದಾರೆ. ನಗರದಲ್ಲಿ ಎಚ್ 1 ಎನ್ 1 ಪ್ರಕರಣಗಳು ಹೆಚ್ಚುತ್ತಿವೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
“ಜ್ವರದಿಂದ ಇದುವರೆಗೆ ಐವರು ಮೃತಪಟ್ಟಿದ್ದಾರೆ. ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾಗಲೇ ಮೃತಪಟ್ಟಿದ್ದಾರೆ. ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಇತರ ಮೂವರು ಕೂಡ ಮೃತಪಟ್ಟಿದ್ದಾರೆ. ಎಲ್ಲಾ ಸರಕಾರಿ ಆಸ್ಪತ್ರೆಗಳಿಗೆ ‘ಅಲರ್ಟ್ ನಲ್ಲಿರುವಂತೆ ಸೂಚಿಸಲಾಗಿದೆ” ಎಂದು ಆರೋಗ್ಯಾಧಿಕಾರಿ ರಮೇಶ್ ರೆಡ್ಡಿ ಮಾಹಿತಿ ನೀಡಿದ್ದಾರೆ.
Next Story