varthabharthi

ರಾಷ್ಟ್ರೀಯ

‘ಮೀಟೂ’ ಬಿಸಿ: ಕೇಂದ್ರ ಸಚಿವ ಎಂ.ಜೆ. ಅಕ್ಬರ್ ರಾಜೀನಾಮೆ

ವಾರ್ತಾ ಭಾರತಿ : 17 Oct, 2018

ಹೊಸದಿಲ್ಲಿ, ಅ.17: ಹಲವು ಮಹಿಳೆಯರಿಂದ ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದ ನಂತರ ಇಂದು ಕೇಂದ್ರ ಸಚಿವ ಎಂ.ಜೆ. ಅಕ್ಬರ್  ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

“ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ನಾನು ರಾಜೀನಾಮೇ ನೀಡುತ್ತಿದ್ದೇನೆ. ದೇಶಕ್ಕಾಗಿ ಸೇವೆಗೈಯಲು ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಅಭಾರಿಯಾಗಿದ್ದೇನೆ” ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)