varthabharthi

ರಾಷ್ಟ್ರೀಯ

ಕಾರಿಗೆ ಲಾರಿ ಢಿಕ್ಕಿ: ಹತ್ತು ಮಂದಿ ಮೃತ್ಯು

ವಾರ್ತಾ ಭಾರತಿ : 17 Oct, 2018

ಭುವನೇಶ್ವರ,ಅ.17: ಒಡಿಶಾದ ನೌಪಾಡಾ ಜಿಲ್ಲೆಯ ಸಿಲಾಡಾ ಬಳಿ ರಾಷ್ಟ್ರೀಯ ಹೆದ್ದಾರಿ 35ರಲ್ಲಿ ಬುಧವಾರ ಲಾರಿ ಮತ್ತು ಕಾರು ಪರಸ್ಪರ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಹಾಗೂ ಚಾಲಕ ಸೇರಿದಂತೆ 10 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರಲ್ಲಿ ಹೆಚ್ಚಿನವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ನೌಪಾಡಾ ಜಿಲ್ಲೆಯಲ್ಲಿನ ವೈಷ್ಣೋದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸ್ವಗ್ರಾಮ, ಛತ್ತೀಸಗಡದ ಪಿಥೋರಾಕ್ಕೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಲಾರಿ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದು,ಆತನ ಪತ್ತೆಗಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)