varthabharthi

ಬೆಂಗಳೂರು

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ; ದಂಪತಿ ಮೃತ್ಯು

ವಾರ್ತಾ ಭಾರತಿ : 17 Oct, 2018

ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.17: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯನದರದ ಪಂಚಶೀಲ ನಗರದ ಶಿವಣ್ಣ (50), ಮಂದಮ್ಮಾ (42) ದಂಪತಿ ಮೃತಪಟ್ಟವರು ಎಂದು ಪೊಲೀಸರು ಗುರುತಿಸಿದ್ದಾರೆ.

ಬುಧವಾರ ಮಧ್ಯಾಹ್ನ ಏಕಾಏಕಿ ಮನೆಯಲ್ಲಿ ಅಡುಗೆ ಅನಿಲ ಸೋರಿಕೆ ಆಗಿ ಸ್ಫೋಟಗೊಂಡ ಪರಿಣಾಮ, ಈ ಇಬ್ಬರು ಮೃತಪಟ್ಟಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಸ್ಪೋಟದ ರಭಸಕ್ಕೆ ಪಕ್ಕದ ಮನೆಯೂ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನ, ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದು, ಮೃತ ದೇಹಗಳನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ವಿಜಯನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)