varthabharthi

ಕರ್ನಾಟಕ

ಮೈಸೂರು: ಮರ ಬಿದ್ದು ನಾಲ್ಕು ಕಾರುಗಳು ಜಖಂ

ವಾರ್ತಾ ಭಾರತಿ : 17 Oct, 2018

ಮೈಸೂರು,ಅ.17: ಮೈಸೂರು-ಹುಣಸೂರು ಮುಖ್ಯರಸ್ತೆಯ ಕಾರ್ ಶೋ ರೂಮ್ ಬಳಿ ಒಣಗಿದ ಬೃಹತ್ ಮರವೊಂದು ಮುರಿದು ಬಿದ್ದ ಪರಿಣಾಮ ನಾಲ್ಕು ಕಾರುಗಳು ಜಖಂಗೊಂಡ ಘಟನೆ ನಡೆದಿದೆ.

ಇಂದು ಮಧ್ಯಾಹ್ನ ರಸ್ತೆಗೆ ಅಡ್ಡಲಾಗಿ ಮರ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ನಾಲ್ಕು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡಿವೆ. ಈ ಹಿಂದೆ ಜಿಲ್ಲಾಧಿಕಾರಿಗಳ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರೋರ್ವರು ಕರೆ ಮಾಡಿ 'ಸಾಕಷ್ಟು ಮರಗಳು ಒಣಗಿವೆ. ದಯವಿಟ್ಟು ಅದನ್ನು ಕತ್ತರಿಸಲು ಮುಂದಾಗಿ' ಎಂದು ವಿನಂತಿಸಿಕೊಂಡಿದ್ದರು. ಕೂಡಲೇ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಕೂಡ ಸಂಬಂಧಪಟ್ಟವರಿಗೆ ಮರ ತೆರವುಗೊಳಿಸುವಂತೆ ಸೂಚಿಸಿದ್ದರು. ಆದರೆ ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಜನ ಸಂಚಾರ ವಿರಳವಿದ್ದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಈ ಸಂಬಂಧ ವಿವಿಪುರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)