ಬಾಡಿಗೆ ಮನೆಯಲ್ಲಿದ್ದ ವ್ಯಕ್ತಿ ನಾಪತ್ತೆ
ಮಂಗಳೂರು, ಅ.20: ನಗರದ ಪಂಜಿಮೊಗರು ಗುಡ್ಡೆಯಂಗಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪರಸಪ್ಪ ಸಿಗ್ಲಿ (35) ಎಂಬವರು ನಾಪತ್ತೆಯಾಗಿದ್ದಾರೆ.
ಗದಗ ತಾಲೂಕು ಗುಲುಗುಳಿ ಸುಡಿ ರೋಣ ನಿವಾಸಿಯಾಗಿದ್ದ ಪರಸಪ್ಪ ಎಂಸಿಎಫ್ ನಲ್ಲಿ ಉದ್ಯೋಗಿಯಾಗಿದ್ದು, ಪತ್ನಿ ಜತೆ ಗುಡ್ಡೆಯಂಗಡಿಯಲ್ಲಿ ವಾಸಿಸುತ್ತಿದ್ದರು. ಶನಿವಾರ ಬೆಳಗ್ಗಿನ ಜಾವ 2 ಗಂಟೆಗೆ ಮನೆಯಿಂದ ಹೊರಗೆ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story