ಚೀನಾ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ; 2 ಸಾವು, 20 ಮಂದಿ ಬಂಧಿ
ಬೀಜಿಂಗ್, ಅ. 21: ಚೀನಾದ ಶಾಂಡಾಂಗ್ ಪ್ರಾಂತದಲ್ಲಿನ ಕಲ್ಲಿದ್ದಲು ಗಣಿಯೊಂದರಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ 20 ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶನಿವಾರ ರಾತ್ರಿ ಸಂಭವಿಸಿದ ಸ್ಫೋಟದಿಂದಾಗಿ ಗಣಿಯಲ್ಲಿನ ನೀರಿಂಗಿಸುವ ಕಾಲುವೆಯ ಒಂದು ಭಾಗಕ್ಕೆ ಹಾನಿಯಾಗಿದೆ.
ಅಪಘಾತ ನಡೆದ ಸಂದರ್ಭದಲ್ಲಿ ಗಣಿಯಲ್ಲಿ 334 ಮಂದಿ ಕೆಲಸ ಮಾಡುತ್ತಿದ್ದರು. ಅವರ ಪೈಕಿ 312 ಮಂದಿಯನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದೆ.
ಎರಡು ಮೃತದೇಹಗಳನ್ನು ರವಿವಾರ ಹೊರತೆಗೆಯಲಾಗಿದೆ. ಉಳಿದ 20 ಮಂದಿಗಾಗಿ ಶೋಧ ಕಾರ್ಯಾಚರಣೆ ಸಾಗಿದೆ.
Next Story