ವಿಷ ಆಹಾರ ಸೇವನೆ: ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿಗಳು ಅಸ್ವಸ್ಥ
ಸಾಂದರ್ಭಿಕ ಚಿತ್ರ
ಮೈಸೂರು,ನ.13: ಕೇರಳದಿಂದ ಮೈಸೂರಿಗೆ ಪ್ರವಾಸಕ್ಕೆಂದು ಬಂದಿದ್ದ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು ವಿಷ ಆಹಾರ ಸೇವನೆಯಿಂದ ಅಸ್ವಸ್ಥರಾಗಿ ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಸರ್ಕಾರಿ ಶಾಲೆಯೊಂದರಿಂದ ಪ್ರವಾಸಕ್ಕೆಂದು ಸೋಮವಾರ ಹಲವು ವಿದ್ಯಾರ್ಥಿಗಳು ಬಂದಿದ್ದರು. ಆ ವಿದ್ಯಾರ್ಥಿಗಳ ಪೈಕಿ 17 ಮಂದಿ ಹೋಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿದ್ದಾರೆ. ಅವರಿಗೆ ಕೆ.ಆರ್.ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
Next Story