ನ. 14ರಂದು ಅಮಿತ್ ಶಾ ಮಂಗಳೂರಿಗೆ
ಮಂಗಳೂರು, ನ.13: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನ.14ರಂದು ಸಂಜೆ 4:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ.
ವಿಮಾನ ನಿಲ್ದಾಣದಿಂದ ನೇರವಾಗಿ ದಿ ಓಶಿಯನ್ ಪರ್ಲ್ ಹೊಟೇಲ್ಗೆ ತೆರಳಿ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಸಂಘನಿಕೇತನದಲ್ಲಿ ನಡೆಯುವ ಬೈಠಕ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ಆನಂತರ ಮಂಗಳೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನ.15ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story