varthabharthi

ಬೆಂಗಳೂರು

ಅಂಬೇಡ್ಕರ್ ಭಾವಚಿತ್ರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯಿಂದ ಪುಷ್ಪ ನಮನ

ವಾರ್ತಾ ಭಾರತಿ : 6 Dec, 2018

ಬೆಂಗಳೂರು, ಡಿ. 6: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಲ್ಲಿನ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುಷ್ಪ ನಮನ ಸಲ್ಲಿಸಿದರು.

ಗುರುವಾರ ಇಲ್ಲಿನ ವಿಧಾನಸೌಧದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರ್ ಅವರ 62ನೆ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಎಚ್.ಆಂಜನೇಯ ಸೇರಿದಂತೆ ಇನ್ನಿತರರು ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ನಗರದ ವಿವಿಧೆಡೆಗಳಿಂದ ಆಗಮಿಸಿದ್ದ ದಲಿತ ಮುಖಂಡರು ಮತ್ತು ಕಾರ್ಯಕರ್ತರು, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗುಲಾಬಿ ಹೂಗಳನ್ನು ಅರ್ಪಿಸಿ, ಗೌರವ ನಮನ ಸಲ್ಲಿಸಿದರು. ಪ್ರತಿಮೆ ಸ್ಥಳದಲ್ಲೆ ಅಂಬೇಡ್ಕರ್ ಅವರ ಭಾವಚಿತ್ರ-ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಲಾಗಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)