ಮಾಜಿ ಸಿಎಂ ಸಿದ್ದರಾಮಯ್ಯ ವಿದೇಶ ಪ್ರವಾಸ
ಬೆಂಗಳೂರು, ಡಿ.10: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಆರಂಭವಾದ ದಿನವೇ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಐದು ದಿನಗಳ ಕಾಲ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಬೆಂಗಳೂರಿನ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೋಮವಾರ ಬೆಳಗ್ಗೆ ಸಿಂಗಾಪುರಕ್ಕೆ ತೆರಳಿದ ಸಿದ್ದರಾಮಯ್ಯ ಅವರಿಗೆ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಬೀಳ್ಕೊಡುಗೆ ನೀಡಿ ಶುಭಹಾರೈಸಿದರು. ಇಂದಿನಿಂದ ಐದು ದಿನಗಳ ಕಾಲ ಸಿಂಗಾಪುರದಲ್ಲಿ ಕಳೆಯಲಿರುವ ಸಿದ್ದರಾಮಯ್ಯ ಡಿ.15 ರಂದು ಹಿಂದುರಗಲಿದ್ದು, ಡಿ.16 ರಿಂದ ಅಧಿವೇಶನದ ಕಲಾಪಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story