varthabharthi

ನಿಧನ

​ವಿಟ್ಲ: ಯುವ ನ್ಯಾಯವಾದಿ ಮಹಮ್ಮದ್ ಶಾಫಿ

ವಾರ್ತಾ ಭಾರತಿ : 2 Jan, 2019

ವಿಟ್ಲ, ಜ.2: ವಿಟ್ಲದ ನಿವಾಸಿ, ರಾಜ್ಯ ಹೈಕೋರ್ಟಿನ ಯುವ ನ್ಯಾಯವಾದಿಯೊಬ್ಬರು ಅಲ್ಪದಿನಗಳ ಅನಾರೋಗ್ಯದಿಂದಾಗಿ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
 
ವಿಟ್ಲ ಕಸಬಾ ಗ್ರಾಮದ ಕಾಂತಡ್ಕ ನಿವಾಸಿ ಕೆ.ಎ.ಹಸೈನಾರ್ ಪುತ್ರ ಮಹಮ್ಮದ್ ಶಾಫಿ(24)ಮೃತಪಟ್ಟವರು.

ಪುತ್ತೂರು ವಿವೇಕಾನಂದ ಕಾನೂನು ವಿದ್ಯಾಲಯದಲ್ಲಿ ವ್ಯಾಸಂಗ ಮುಗಿಸಿದ್ದ ಶಾಫಿ ಇತ್ತೀಚೆಗಷ್ಟೆ ರಾಜ್ಯ ಹೈಕೋರ್ಟಿನ ಹಿರಿಯ ನ್ಯಾಯವಾದಿಯೊಬ್ಬರ ಜೊತೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲದಿನಗಳ ಹಿಂದೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಕಾರಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ತಂದೆ-ತಾಯಿ, ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)