varthabharthi

ಗಲ್ಫ್ ಸುದ್ದಿ

ರಾಹುಲ್ ಗಾಂಧಿ ದುಬೈ ಕಾರ್ಯಕ್ರಮಕ್ಕೆ ಭರದ ಸಿದ್ದತೆ

ವಾರ್ತಾ ಭಾರತಿ : 11 Jan, 2019

ದುಬೈ, ಜ.10: ಜನವರಿ 11ರಂದು ದುಬೈಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆಯುತ್ತಿದ್ದು, ರಾಜೀವ್ ಗಾಂಧಿ ಆರೋಗ್ಯ ವಿವಿ ಸಿಂಡಿಕೇಟ್ ಸದಸ್ಯ ಪ್ರೊ.ಯು.ಟಿ ಇಫ್ತಿಕಾರ್ ಅಲಿ ಸೇರಿದಂತೆ ಹಲವು ಅನಿವಾಸಿ ಕಾಂಗ್ರೆಸ್ ಮುಖಂಡರು ಸ್ಥಳ ಪರಿಶೀಲನೆ ನಡೆಸಿದರು.

ಶುಕ್ರವಾರ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ರಾಹುಲ್ ಗಾಂಧಿ ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ದುಬೈ ಅನಿವಾಸಿ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ್ದು, ಭರದ ಸಿದ್ದತೆ ನಡೆಯುತ್ತಿದೆ.

ಗುರುವಾರ ರಾತ್ರಿ ರಾಹುಲ್ ಗಾಂಧಿ ದುಬೈ ತಲುಪಿದ್ದು, ಶುಕ್ರವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 40,000 ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)